ಬೆಂಗಳೂರು, 27 ಜುಲೈ (ಹಿ.ಸ.) :
ಆ್ಯಂಕರ್ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2025-26ನೇ ಸಾಲಿಗಾಗಿ ಒಂದನೆಯ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನ ಹಾಗೂ ಪಿಂಚಣಿ ಇಲ್ಲದ ರಾಜ್ಯದ ಹಾಗೂ ಪಿಂಚಣಿ ಪಡೆಯುತ್ತಿರುವ ಹೊರ ರಾಜ್ಯದ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಅಕ್ಟೋಬರ್ 20, 2025 ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 20,2025 ರಂದು ಕೊನೆಯ ದಿನವಾಗಿರುತ್ತದೆ.
ಶಿಷ್ಯವೇತನಕ್ಕಾಗಿ ಸಲ್ಲಿಸುವ ಅರ್ಜಿಯಲ್ಲಿ ಸಂಬಂಧಪಟ್ಟ ಮಾಜಿ ಸೈನಿಕರ ಮತ್ತು ಅವರ ಮ್ಕಕಳ ಆಧಾರ್ ಕಾರ್ಡ್ ಪ್ರತಿ ಮತ್ತು ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ನ ಮೊದಲನೇ ಪುಟದ ಪ್ರತಿ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಭವನ , #58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು-25 ಅಥವಾ ದೂರವಾಣಿ ಸಂಖ್ಯೆ : 080-25585119 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa