ಬೆಳಗಾವಿ, 27 ಜುಲೈ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕೃಷ್ಣಾ ಮತ್ತು ದೂದಗಂಗಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ 30,000 ಕ್ಯೂಸೆಕ್ ಹಾಗೂ ದೂದಗಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ 8 ಸೇತುವೆಗಳು ಜಲಾವೃತಗೊಂಡಿವೆ.
ಯಡೂರು–ಕಲ್ಲೋಳ, ಮಲ್ಲಿಕವಾಡ–ದತ್ತವಾಡ, ಭೋಜವಾಡಿ–ಕಾರದಗಾ ಸೇರಿ 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ನೀರಿನಲ್ಲಿ ಮುಳುಗಿದ್ದು, ಜನರು ಪರ್ಯಾಯ ಮಾರ್ಗ ಬಳಸುತ್ತಿದ್ದಾರೆ. ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa