ನವದೆಹಲಿ, 27 ಜುಲೈ (ಹಿ.ಸ.) :
ಆ್ಯಂಕರ್ : ಮಾಜಿ ರಾಷ್ಟ್ರಪತಿ ಮತ್ತು ಖ್ಯಾತ ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗೌರವ ನಮನ ಸಲ್ಲಿಸಿದ್ದಾರೆ.
‘ಕ್ಷಿಪಣಿ ಮನುಷ್ಯ’ ಎಂದೇ ಖ್ಯಾತರಾದ ಕಲಾಂ ಅವರು ದೇಶಭಕ್ತಿ, ವೈಜ್ಞಾನಿಕ ಚಿಂತನೆ ಮತ್ತು ಸಾಮಾನ್ಯ ವ್ಯಕ್ತಿಗೂ ಎತ್ತರದ ಸಾಧನೆಯ ಮಾರ್ಗ ತೋರಿದವರು. ಅವರ ಸರಳತೆ ಮತ್ತು ದೇಶಸೇವೆ ಮುಂದಿನ ಪೀಳಿಗೆಗೆ ಶಾಶ್ವತ ಪ್ರೇರಣೆಯಾಗಿದೆ ಎಂದು ಪ್ರಧಾನ್ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa