ನವದೆಹಲಿ, 27 ಜುಲೈ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ಹರಿದ್ವಾರದ ಮಾನಸ ದೇವಿ ದೇವಾಲಯದ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದ ದುರ್ಘಟನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಮಾಜಿಕ ಮಾಧ್ಯಮದಲ್ಲಿ ತಮ್ಮ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, “ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ನಡೆದ ಕಾಲ್ತುಳಿತದಿಂದ ಉಂಟಾದ ಜೀವಹಾನಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ನೀಡುತ್ತಿದೆ,” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa