ಕೊಪ್ಪಳ, 27 ಜುಲೈ (ಹಿ.ಸ.) :
ಆ್ಯಂಕರ್ : ಧಾರಾಕಾರ ಮಳೆಯಾದ ಪರಿಣಾಮ ಟಿಬಿ ಡ್ಯಾಂಗೆ (ತುಂಗಭದ್ರಾ ಜಲಾಶಯ) ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆ 26 ಕ್ರಸ್ಟ್ ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ.
ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಹೆಚ್ಚಿದ್ದು, ಹಂಪಿಯ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಟಿಬಿ ಬೋರ್ಡ್ ಅಧಿಕಾರಿಗಳು ಜನರಿಗೆ ನದಿ ತೀರದತ್ತ ಹೋಗಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾದರೆ ಹೆಚ್ಚಿನ ನೀರನ್ನು ನದಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa