ಅಮೃತಸರ, 27 ಜುಲೈ (ಹಿ.ಸ.) :
ಆ್ಯಂಕರ್ : ಪಂಜಾಬ್ ಗಡಿ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಐಎಸ್‌ಐ ಬೆಂಬಲಿತ ಭಯೋತ್ಪಾದಕರ ಜಾಲವನ್ನು ಪಂಜಾಬ್ ಪೊಲೀಸರು ಭೇದಿಸಿದ್ದಾರೆ. ಅಮೃತಸರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ ಎಕೆ ಸೈಗಾ ರೈಫಲ್, ಎರಡು ಗ್ಲಾಕ್ ಪಿಸ್ತೂಲ್‌ಗಳು, 100ಕ್ಕೂ ಹೆಚ್ಚು ಜಿಂತೆಗಾರ ಗುಂಡುಗಳು, ₹7.5 ಲಕ್ಷ ನಗದು, ಒಂದು ಕಾರು ಹಾಗೂ ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳ ಜೊತೆ ಸಂಪರ್ಕ ಹೊಂದಿದ್ದ ಈ ಗ್ಯಾಂಗ್, ಕುಖ್ಯಾತ ಅಪರಾಧಿ ಜಗ್ಗು ಭಗವಾನ್‌ಪುರಿಯಾ ನಿಕಟವರ್ತಿ ನವ್ ಅಲಿಯಾಸ್ ಪಂಡೋರಿಗೆ ಶಸ್ತ್ರಾಸ್ತ್ರ ಹಸ್ತಾಂತರಿಸುವ ಯೋಜನೆಯಲ್ಲಿತ್ತು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.
ಈ ಜಾಲವು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳ ನಡುವೆ ಗಾಢ ನಂಟು ಹೊಂದಿದೆ. ರಾಜ್ಯದಲ್ಲಿ ಇಂಥಾ ಅಪರಾಧಗಳನ್ನು ಬೇರು ಸಹಿತ ನಿರ್ಮೂಲನೆ ಮಾಡುವುದು ಪಂಜಾಬ್ ಪೊಲೀಸರ ಪ್ರಮುಖ ಗುರಿಯಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa