ಬಿಹಾರದಲ್ಲಿ ಸಫಾಯಿ ಕರ್ಮಚಾರಿ ಆಯೋಗ ರಚನೆ
ಪಾಟ್ನಾ, 27 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಸಫಾಯಿ ಕರ್ಮಚಾರಿ ಆಯೋಗವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಆಯೋಗವು ನೈರ್ಮಲ್ಯ ಕಾರ್ಮಿಕರ ಹಕ್ಕುಗಳ ರಕ್ಷಣೆ, ಪುನರ್ವಸತಿ, ಕಲ್ಯಾಣ ಹಾಗೂ ಯೋಜನೆಗಳ ಮೇಲ್ವಿಚಾರಣೆಯನ್ನು ನಿರ್ವಹಿಸಲಿದೆ. ನಿತೀಶ
ಬಿಹಾರದಲ್ಲಿ ಸಫಾಯಿ ಕರ್ಮಚಾರಿ ಆಯೋಗ ರಚನೆ


ಪಾಟ್ನಾ, 27 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಸಫಾಯಿ ಕರ್ಮಚಾರಿ ಆಯೋಗವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಆಯೋಗವು ನೈರ್ಮಲ್ಯ ಕಾರ್ಮಿಕರ ಹಕ್ಕುಗಳ ರಕ್ಷಣೆ, ಪುನರ್ವಸತಿ, ಕಲ್ಯಾಣ ಹಾಗೂ ಯೋಜನೆಗಳ ಮೇಲ್ವಿಚಾರಣೆಯನ್ನು ನಿರ್ವಹಿಸಲಿದೆ.

ನಿತೀಶ್ ಅವರು ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿ, ನೈರ್ಮಲ್ಯ ಕಾರ್ಮಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ಹಾಗೂ ಅವರ ಅಭಿವೃದ್ಧಿಗೆ ಬದ್ಧವಾಗಿರುವ ಆಯೋಗದ ಅಗತ್ಯವಿದೆ ಎಂದಿದ್ದಾರೆ.

ಈ ಆಯೋಗದಲ್ಲಿ ಒಬ್ಬ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಐದು ಸದಸ್ಯರಿರಲಿದ್ದು, ಕನಿಷ್ಠ ಒಬ್ಬ ಸದಸ್ಯರು ಮಹಿಳೆ ಅಥವಾ ಲಿಂಗ ವೈವಿಧ್ಯತೆಯವರಾಗಿರುತ್ತಾರೆ. ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡುವುದು ಮತ್ತು ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಜವಾಬ್ದಾರಿಯೂ ಆಯೋಗದ ಮೇಲಿರುತ್ತದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande