ಕೊಂಡರಾಜನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಕೊಂಡರಾಜನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಕೋಲಾರ ತಾಲ್ಲೂಕಿನ ಕೊಂಡರಾಜನಹಳ್ಳಿ ರ‍್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರರ‍್ಶನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ವಿ. ಶ್ರೀನಿವಾಸ್ ಉದ್ಘಾಟಿಸಿದರು.


ಕೋಲಾರ, ೨೭ ಜುಲೈ (ಹಿ.ಸ) :

ಆ್ಯಂಕರ್ : ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಯೋಗಗಳು ಅತ್ಯವಶ್ಯಕ ಎಂದು ಕೊಂಡರಾಜನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಕೋಲಾರ ತಾಲ್ಲೂಕಿನ ಕೊಂಡರಾಜನಹಳ್ಳಿ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕುಪ್ಪಂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನರವರುಗಳ ವತಿಯಿಂದ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಕೊಂಡರಾಜನಹಳ್ಳಿ ಗ್ರಂಥಾಲಯ ಗ್ರಂಥಪಾಲಕರು ಮಂಜುಳ ಮಾತನಾಡಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನಗಳು ಮತ್ತು ಚಟುವಟಿಕೆಗಳು ಸಹಕಾರಿಯಾಗಲಿದೆ ಎಂದರು.

ಕೊAಡರಾಜನಹಳ್ಳಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಉಪ ಪ್ರಾಂಶುಪಾಲ ಕೆ.ವಿ.ಜಗನ್ನಾಥ್ ಮಾತನಾಡಿ ಕುಪ್ಪಂನ ಅಗಸ್ತ್ಯ ಫೌಂಡೇಷನ್ ರವರು ಕೋಲಾರ ತಾಲ್ಲೂಕಿನ ಶಾಲೆಗಳಲ್ಲಿ ಎಂಟು ವರ್ಷಗಳಿಂದ ವೈಜ್ಞಾನಿಕ ಬೆಳೆಗೆಗೆ ಇಂತಹ ಚಟುವಟಿಕೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಸುಬ್ರರಾಮಪ್ಪ ಅಗಸ್ತ್ಯ ಫೌಂಡೇಷನ್ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಸಿರೀಶ, ಸಹ ಶಿಕ್ಷಕರಾದ ವಿಜಿಯಮ್ಮ, ಶ್ರೀ ರಾಮ್, ವಿಜ್ಞಾನ ಶಿಕ್ಷಕರಾದ ವಿಜಿರಾಜ್ ಭಾಗವಹಿಸಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಕೊಂಡರಾಜನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ವಿ. ಶ್ರೀನಿವಾಸ್ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande