ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಅಹ್ವಾನ
ಹೊಸಪೇಟೆ, 28 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೂತನವಾಗಿ ಆರಂಭಿಸಿರುವ ಕಮಲಾಪುರ (ಹೊಸಪೇಟೆ) ಪ್ರಾದೇಶಿಕ ಕೇಂದ್ರದಿಂದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇ
ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಅಹ್ವಾನ


ಹೊಸಪೇಟೆ, 28 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೂತನವಾಗಿ ಆರಂಭಿಸಿರುವ ಕಮಲಾಪುರ (ಹೊಸಪೇಟೆ) ಪ್ರಾದೇಶಿಕ ಕೇಂದ್ರದಿಂದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಎಂ.ಪ್ರಶಾಂತ್ ತಿಳಿಸಿದ್ದಾರೆ.

ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತು, ಖಾಸಗಿ, ಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ದೂರಶಿಕ್ಷಣ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ವಿಜಯನಗರ ಜಿಲ್ಲಾ ವ್ಯಾಪ್ತಿಯ ಆಸಕ್ತ ವಿದ್ಯಾರ್ಥಿ ಮತ್ತು ಪೆÇೀಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪ್ರಥಮ ಬಿಎ, ಬಿಕಾಂ, ಬಿಎಸ್ಸಿ, ಬಿಲಿಬ್, ಐಎಸ್ಸಿ, ಬಿಸಿಎ, ಬಿಬಿಎ ಮತ್ತು ಬಿಎಸ್‍ಡಬ್ಲೂ ಹಾಗೂ ಎಂಎ (ಕನ್ನಡ, ಇಂಗ್ಲಿμï, ಹಿಂದಿ, ಸಂಸ್ಕøತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ), ಎಂಎ-ಪತ್ರಿಕೋದ್ಯಮ ಮತ್ತು ಸಮೂಹ, ಸಂವಹನ, ಎಂ.ಕಾಂ, ವಿವಿಧ ಎಂ.ಎಸ್ಸಿ (ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೆÇೀಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೆÇೀಷಣೆ, ಜೀವರಸಾಯನ ಶಾಸ್ತ್ರ, ಭೂಗೋಳ ಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿವಿಯ ನಿಯಮಗಳಿಗೆ ಅನುಗುಣವಾಗಿ ಸ್ಥಳದಲ್ಲಿಯೇ ದಾಖಲಾತಿ ಪಡೆದು ಪ್ರವೇಶ ನೀಡಲಾಗುವುದು.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಉಚಿತ ಪ್ರವೇಶ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಾಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಥಮ ಬಿಎ, ಬಿಕಾಂ, ಬಿಎಸ್ಸಿ, ಬಿಲಿಬ್, ಐಎಸ್ಸಿ, ಬಿಸಿಎ ಬಿಬಿಎ ಮತ್ತು ಬಿಎಸ್‍ಡಬ್ಲೂ, ಹಾಗೂ ವಿವಿಧ ಎಂಎ, ಎಂಕಾಂ ಎಂಎಸ್ಸಿ, ಪದವಿ ಶಿಕ್ಷಣ ಕ್ರಮಗಳಿಗೆ ಪ್ರಾದೇಶಿಕ ಕೇಂದ್ರಗಳ ಮೂಲಕ ಉಚಿತ ಪ್ರವೇಶ ಕಲ್ಪಿಸಲಾಗಿದ್ದು ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಇದರ ಪ್ರಯೋಜನೆ ಪಡೆಯಬಹುದು.

ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಹಾಕಿಕೊಂಡು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಜಯನಗರ ಪ್ರಾದೇಶಿಕ ಕೇಂದ್ರ ಕಮಲಾಪುರ ಕಚೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್‍ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಕಚೇರಿಗೆ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ : ಪ್ರಾದೇಶಿಕ ನಿರ್ದೇಶಕರು 9945171920, ಅಂರ್ತಜಾಲ ವಿಳಾಸ www.ksoumysuru.ac.in ಹಾಗೂ ಪ್ರವೇಶಾತಿಗಾಗಿ 8088457148, 8088681698 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande