ನವದೆಹಲಿ, 28 ಜುಲೈ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ದುರ್ಗ್‌ನಲ್ಲಿ ಬಲವಂತದ ಮತಾಂತರ ಹಾಗೂ ಮಾನವ ಕಳ್ಳಸಾಗಣೆ ಆರೋಪದ ಮೇಲೆ ಮೂವರು ಕ್ಯಾಥೋಲಿಕ್ ಸನ್ಯಾಸಿನಿಯರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಎಂದು ಆರೋಪಿಸಿದ್ದಾರೆ. ಇದು ನ್ಯಾಯವಲ್ಲ, ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹ ಇದನ್ನು ಖಂಡಿಸಿದ್ದಾರೆ. ಸಂಸತ್ತಿನ ಹೊರಗೆ ಈ ಕುರಿತಂತೆ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು.
ಜುಲೈ 26 ರಂದು ಬಜರಂಗದಳದ ದೂರಿನ ಮೇರೆಗೆ, ದುರ್ಗ್ ರೈಲು ನಿಲ್ದಾಣದಲ್ಲಿ ಇಬ್ಬರು ಸನ್ಯಾಸಿನಿಯರು ಮತ್ತು ಮತ್ತೊಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa