ವಿಜಯಪುರ, 28 ಜುಲೈ (ಹಿ.ಸ.) :
ಆ್ಯಂಕರ್ : ವಿಶ್ವಗುರು ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಕೈಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಅರವಿಂದ ಕುಲಕರ್ಣಿ ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಬಾಪುರಿ ಶ್ರೀಗಳು ವಿಶ್ವಗುರು ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ಖಂಡನೀಯ ಎಂದು ರಂಬಾಪುರಿ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ, ಅಡ್ಡ ಪಲ್ಲಕ್ಕಿ ಮಾಡುವ ರಂಬಾಪುರಿ ಶ್ರೀಗಳು ತಮ್ಮಷ್ಟಕ್ಕೆ ತಾವೇ ಜಗದ್ಗುರುಗಳು ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಆದ್ರೇ, ಪಂಚಾಚಾರ್ಯಗಳು ಬಸವಣ್ಣನವರ ವ್ಯಕ್ತಿತ್ವದ ಬಗ್ಗೆ ಹೇಳಿಕೆ ನೀಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande