ರಾಯಚೂರು, 28 ಜುಲೈ (ಹಿ.ಸ.) :
ಆ್ಯಂಕರ್ : ರಾಯಚೂರು ಜಿಲ್ಲೆಯ ತಾಲೂಕು ಹಾಗೂ ಗ್ರಾಮೀಣ ಭಾಗದಿಂದ ಆಗಮಿಸಿದ ಜನರ ಕುಂದು ಕೊರತೆಗಳನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ತಮ್ಮ ನಿವಾಸದಲ್ಲಿ ಆಲಿಸಿ ಸ್ಥಳದಲ್ಲಿಯೇ ಪರಿಹರಿಸಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳನ್ನು ಸಂಬಂದಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಣ್ಣ-ಪುಟ್ಟ ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಪ್ರತಿಕ್ರಿಯಿಸಿ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಕುಡಿಯುವ ನೀರು, ವಿದ್ಯುತ್, ರಸ್ತೆ ಚರಂಡಿಸೇರಿದಂತೆ ಇನ್ನೀತರ ಮೂಲಭೂತ ಸೌಲಭ್ಯಗಳ ಕುರಿತು ಗಮನ ಹರಿಸಬೇಕೆಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್ ಗುಡದಿನ್ನಿ, ಕೆ ಶಾಂತಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಬಸವರಾಜ ಸೇರಿ ಸಾರ್ವಜನಿಕರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್