ಕೊಪ್ಪಳ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 28 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕ
ಕೊಪ್ಪಳ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 28 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿಯಲ್ಲಿನ ಸ್ನಾತಕೋತ್ತರ ಪದವಿಯ ವಿಭಾಗಗಳಿಗೆ ಆಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯು.ಜಿ.ಸಿ ನಿಯಮಾನುಸಾರ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಆಸಕ್ತಿಯುಳ್ಳ ಅತಿಥಿ ಉಪನ್ಯಾಸಕರನ್ನು ಪಡೆಯಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ವನ್ನು ನೋಡಬಹುದಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande