ಎಂವಿಎ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ
ಹೊಸಪೇಟೆ, 28 ಜುಲೈ (ಹಿ.ಸ.) : ಆ್ಯಂಕರ್ : 2025-26 ನೇ ಶೈಕ್ಷಣಿಕ ಸಾಲಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಮೈಸೂರಿನಲ್ಲಿ ಪ್ರಥಮ ಬ್ಯಾಚುಲರ್ ವಿಜ್ಯುಯಲ್ ಆಟ್ರ್ಸ್ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಪ್ ವಿಜ್ಯುಯಲ್ ಆಟ್ರ್ಸ್ (ಎಂವಿಎ) ಪ್ರಥಮ ಸ್ನಾತಕ
ಎಂವಿಎ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ


ಹೊಸಪೇಟೆ, 28 ಜುಲೈ (ಹಿ.ಸ.) :

ಆ್ಯಂಕರ್ : 2025-26 ನೇ ಶೈಕ್ಷಣಿಕ ಸಾಲಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಮೈಸೂರಿನಲ್ಲಿ ಪ್ರಥಮ ಬ್ಯಾಚುಲರ್ ವಿಜ್ಯುಯಲ್ ಆಟ್ರ್ಸ್ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಪ್ ವಿಜ್ಯುಯಲ್ ಆಟ್ರ್ಸ್ (ಎಂವಿಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಮೈಸೂರಿನ ಡೀನ್ ತಿಳಿಸಿದ್ದಾರೆ.

ಎಂವಿಎ ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿಬಿಸಿಎಸ್ ಪದ್ದತಿ ಎಂವಿಎ ಸ್ನಾತಕೋತ್ತರ ಪದವಿಯಲ್ಲಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ವರ್ಷದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ರ್ಸ್ (ಎಂವಿಎ) ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್.7 ರಂದು ಕೊನೆಯ ದಿನಾಂಕವಾಗಿದ್ದು, ಆಗಸ್ಟ್.11 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಅಂತರ್ಜಾಲ ವಿಳಾಸ https://www.mysore.nic.in ಅಥವಾ https://www.cavamysore.karnataka.gov.in ದಲ್ಲಿ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಲಯದ ಸಹಾಯವಾಣಿ ಸಂಖ್ಯೆ 0821-2438931 ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬೇಕೆಂದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande