ಶ್ರೀನಗರ, 28 ಜುಲೈ (ಹಿ.ಸ.) :
ಆ್ಯಂಕರ್ : ಆಪರೇಷನ್ ಮಹಾದೇವ್ ಅಡಿಯಲ್ಲಿ, ಭಾರತೀಯ ಭದ್ರತಾ ಪಡೆಗಳು ಜಮ್ಮು ಕಾಶ್ಮೀರದ ಶ್ರೀನಗರದ ದಚಿಗಮ್ ಕಾಡಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉನ್ನತ ಲಷ್ಕರ್ ಭಯೋತ್ಪಾದಕರು ಬಲಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಶ್ರೀನಗರದ ಹರ್ವಾನ್ ಪ್ರದೇಶದಲ್ಲಿ ಆಪರೇಷನ್ ಮಹಾದೇವ್ ಅಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಡೆದ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪ್ರದೇಶವನ್ನು ಸುತ್ತುವರಿಯಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ 3 ಪ್ರಮುಖ ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಕೊಂದಿವೆ.
ಕೊಲ್ಲಲ್ಪಟ್ಟ ಭಯೋತ್ಪಾದಕರು ಪಹಲ್ಗಾಮ್ ಹತ್ಯಾಕಾಂಡದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನೂ ಕೆಲವು ಭಯೋತ್ಪಾದಕರು ಅಡಗಿರುವ ಶಂಕೆಯಿದೆ, ಕಾರ್ಯಾಚರಣೆ ಮುಂದುವರೆದಿದೆ.
ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ 'ಹಾಶಿಮ್ ಮೂಸಾ' ಅಲಿಯಾಸ್ 'ಸುಲೇಮಾನ್' ಭಾರತೀಯ ಸೇನೆಯ ವಿಶೇಷ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಹಾಶಿಮ್ ಮೂಸಾ ಪಾಕಿಸ್ತಾನಿ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕ ಎಂದು ತಿಳಿದುಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa