ರಾಯಚೂರು, 28 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿದಿಂದ 2025ರ ಸಾಲಿನ ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಮಾಲೋಚನೆ ಹಾಗೂ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಜುಲೈ 31ರ ಬೆಳಿಗ್ಗೆ 11.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್