ರಾಯಚೂರು, 28 ಜುಲೈ (ಹಿ.ಸ.) :
ಆ್ಯಂಕರ್ : ರಾಯಚೂರಿನ ಯರಮರಸ್ ಡಯಟ್ ಕಾಲೇಜಿನಲ್ಲಿ ಆಗಸ್ಟ್ 2ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲು 200 ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ. 163ರ ಪ್ರಕಾರ ನಿμÉೀಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾ ದಂಡಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಈ ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ ಎಲ್ಲಾ ಝರಾಕ್ಸ್ ಅಂಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷೆ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್