ರಾಜ್ಯದ ಪಾಲಿನ ಗೊಬ್ಬರ ಕೇಂದ್ರ ನೀಡುತ್ತಿಲ್ಲ : ಮುಖ್ಯಮಂತ್ರಿ
ಮಂಡ್ಯ, 28 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸರ್ಕಾ
Cm


ಮಂಡ್ಯ, 28 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,

ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande