ನಾಳೆ ವಿಶ್ವ ಮೆದುಳು ದಿನಾಚರಣೆ
ಬಳ್ಳಾರಿ, 28 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ “ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ” ಎಂಬ
ನಾಳೆ ವಿಶ್ವ ಮೆದುಳು ದಿನಾಚರಣೆ


ಬಳ್ಳಾರಿ, 28 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ “ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ” ಎಂಬ ಘೋಷಣೆಯೊಂದಿಗೆ ಜು.29 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಮುಂಭಾಗದ ಆವರಣದಲ್ಲಿ ವಿಶ್ವ ಮೆದುಳಿನ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಶ್ವನಾಥ್.ಕೆ., ಜಿಲ್ಲಾ ಆಸ್ಪತ್ರೆಯ ವಿಭಾಗೀಯ ಮುಖ್ಯಸ್ಥರು ಹಾಗೂ ತಜ್ಞ ವೈದ್ಯ ಡಾ.ಶ್ರೀಧರ್ ಎಮ್.ಆರ್., ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನರರೋಗ ತಜ್ಞ ವೈದ್ಯ ಡಾ.ಕಮಲ್ ಕುಮಾರ್ ಜೈನ್, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನೋಡಲ್ ಅಧಿಕಾರಿ ಹಾಗೂ ತಜ್ಞ ವೈದ್ಯ ಡಾ.ರಾಕೇಶ್, ಜಿಲ್ಲಾ ಆಸ್ಪತ್ರೆಯ ಆಡಳಿತ ಸಹಾಯಕ ಅಧಿಕಾರಿಗಳಾದ ದುರುಗಪ್ಪ.ಟಿ., ರಜೀಯಾ ಬೇಗಂ, ಶುಶ್ರೂಷಾಧೀಕ್ಷಕಿ ವಿಮಲಾಕ್ಷಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಕಾರ್ಯಕ್ರಮ ನಿರೂಪಿಸುವರು. ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಸಣ್ಣಕೇಶವ ಸ್ವಾಗತಿಸುವರು.

ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಸಿಬ್ಬಂದಿ ವರ್ಗ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು.

ಅಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಆವರಣದಲ್ಲಿ ಮೆದುಳು ಚುರುಕುಗೊಳಿಸುವ ಚಟುವಟಿಕೆಗಳು ನಡೆಯಲಿವೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande