ಬಳ್ಳಾರಿ, 28 ಜುಲೈ (ಹಿ.ಸ.) :
ಆ್ಯಂಕರ್ : ಯೂರಿಯಾ ಗೊಬ್ಬರವನ್ನು ಪೂರೈಸುವಲ್ಲಿ ವಿಫಲವಾಗಿರುವ ಸರ್ಕಾರ ಮತ್ತು ಕೃಷಿ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಅವರು ಆಗ್ರಹಿಸಿದ್ದಾರೆ.
ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಪ್ಪಳದಲ್ಲಿ ರೈತರು ಯೂರಿಯಾ ಸಿಗದೇ ಮಣ್ಣನ್ನು ತಿಂದಿದ್ದಾರೆ. ಅಲ್ಲಲ್ಲಿ, ಕಳಪೆ ಯೂರಿಯಾ, ನಕಲಿ ಯೂರಿಯಾ, ಯೂರಿಯಾ ಪೂರೈಕೆಯಲ್ಲಿ ಅಸಮರ್ಪಕತೆ ಇರುವ ಕಾರಣ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಇಲಾಖೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರನ್ನು ಹೀಯಾಳಿಸಲು – ಟೀಕಿಸಲು, ಬಯ್ಯಲಿಕ್ಕಾಗಿಯೇ ಮದ್ದೂರಿನಲ್ಲಿ ಸಮಾವೇಶ ಮಾಡಿರುವ ಸಚಿವ ಚಲುವರಾಯಸ್ವಾಮಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು ಮೋಕ, ಗುರುಲಿಂಗನಗೌಡ, ಪಿ. ಓಬಳೇಶ್ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್