ಜಿಲ್ಲಾ ಪಂಚಾಯತ್ ಸಹಾಯವಾಣಿ ಪ್ರಾರಂಭ
ರಾಯಚೂರು, 28 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಅಧೀನದ ಇಲಾಖೆಗಳಿಂದ ಒದಗಿಸಲಾಗುವ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರುಗಳನ್ನು ಆಲಿಸಲು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಾರ್
ಜಿಲ್ಲಾ ಪಂಚಾಯತ್ ಸಹಾಯವಾಣಿ ಪ್ರಾರಂಭ


ರಾಯಚೂರು, 28 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಅಧೀನದ ಇಲಾಖೆಗಳಿಂದ ಒದಗಿಸಲಾಗುವ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರುಗಳನ್ನು ಆಲಿಸಲು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಸದಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ ಕಾಂದೂ ಅವರು ತಿಳಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ಕಚೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಸಹಾಯವಾಣಿ ಸಂಖ್ಯೆ:08532-230539ಗೆ ಕರೆ ಮುಖಾಂತರ ಅಹ್ವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande