ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಗದಗ, 29 ಜುಲೈ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮನಿಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಪೋಟೋ


ಗದಗ, 29 ಜುಲೈ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮನಿಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಅಗಸ್ಟ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಅವರುಗಳು ಆಗಮಿಸುವರು.

ಗದಗ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅರವಿಂದ ಕರಿನಾಗಣ್ಣವರ ಉಪನ್ಯಾಸ ನೀಡಲಿದ್ದಾರೆ.

ರೋಣದ ಜೀವನ ಬೆಳಕು ಕಲಾ ತಂಡದ ರಾಜಶೇಖರ ಹಿರೇಮಠ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಮಹೇಶ ಎನ್.ಎಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ ಮಡ್ಲೂರ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande