ಹೊಸಪೇಟೆ, 29 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿಗೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರಿಗೆ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಮತ್ತು ತಾಲೂಕು ಕಚೇರಿಗಳು, ಅಲ್ಪಸಂಖ್ಯಾತರ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ. ಹೊಸಪೇಟೆ ಮೊ.8050435366, ಕೂಡ್ಲಿಗಿ ಮತ್ತು ಕೊಟ್ಟೂರು ಮೊ.9060330060, ಹರಪನಹಳ್ಳಿ ಮೊ.8494927891, ಹೂವಿನಹಡಗಲಿ ಮೊ.7353696984, ಹಗರಿಬೊಮ್ಮನಹಳ್ಳಿ ಮೊ.9980237242 ಸಂಖ್ಯೆಗೆ ಕರೆ ಮಾಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್