ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾಸನ, 29 ಜುಲೈ (ಹಿ.ಸ.) : ಆ್ಯಂಕರ್ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ನಡೆದ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಘೋಷಿಸಿದೆ. ಇದರಡಿಯಲ
ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ


ಹಾಸನ, 29 ಜುಲೈ (ಹಿ.ಸ.) :

ಆ್ಯಂಕರ್ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ನಡೆದ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಘೋಷಿಸಿದೆ. ಇದರಡಿಯಲ್ಲಿ ಪ್ರತಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಯಲ್ಲಿ ಗರಿಷ್ಟ ಅಂಕ ಪಡೆದ ಇಬ್ಬರು ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಗರಿಷ್ಟ ಅಂಕ ಪಡೆದ ಒಬ್ಬ ವಿದ್ಯಾರ್ಥಿಗಳು ಈ ಪ್ರಶಸ್ತಿಯನ್ನು ಪಡೆಯಲು ಅರ್ಹರಿರುತ್ತಾರೆ.

ಸದರಿ ಪ್ರಶಸ್ತಿಯನ್ನು ಪಡೆಯಲು ಶೇಕಡ 60 ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಮಾಜಿ ಸೈನಿಕರ ಮಕ್ಕಳು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಹಾಸನ ಕಾರ್ಯಾಲಯದಲ್ಲಿ ಅಕ್ಟೋಬರ್.31 ರೊಳಗೆ ಹೆಸರನ್ನು ನೋಂದಾಯಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande