ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ, 29 ಜುಲೈ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯ ಚಟುವಟಿಕೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಹೊಸಪೇಟೆ ತಾಲೂಕಿನಲ್ಲಿ ವಿಶೇಷ ಚೇತನರ ಮಕ್ಕಳಗೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಕ್ಷೇತ್ರ ಸಮನ್ವಯಾಧಿಕಾ
ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ


ಹೊಸಪೇಟೆ, 29 ಜುಲೈ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯ ಚಟುವಟಿಕೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಹೊಸಪೇಟೆ ತಾಲೂಕಿನಲ್ಲಿ ವಿಶೇಷ ಚೇತನರ ಮಕ್ಕಳಗೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಶಿವಕುಮಾರ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಇನ್ ಫಿಜಿಯೋಥೆರಪಿ ಉತ್ತೀರ್ಣರಾಗಿರಬೇಕು. ಆಗಸ್ಟ್.4 ರೊಳಗೆ ಅರ್ಜಿಯನ್ನು ಖುದ್ದಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರ(ಬಿಆರ್‌ಸಿ) ಸಲ್ಲಿಸತಕ್ಕದು. ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಆಗಸ್ಟ್ 5 ರಂದು, ಕ್ಷೇತ್ರ ಸಂಪನ್ಮೂಲ ಕೇಂದ್ರ(ಬಿಆರ್‌ಸಿ) ಹೊಸಪೇಟೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಎಂ.ಶಿವಕುಮಾರ ಹೊಸಪೇಟೆ ಕ್ಷೇತ್ರ ಸಮನ್ವಯ ಅಧಿಕಾರಿ ಮೊ.9480695078 ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande