ಗದಗ, 29 ಜುಲೈ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ.ಪಂ. ಗದಗ ಇವರ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಮೇಘಾ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ರಕ್ತದಾನವು ಅಮೂಲ್ಯ ದಾನವಾಗಿದೆ. ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಬಹುದು ಹಾಗೂ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಡಿಎಲ್‌ಓ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಕುಟುಂಬ ಕಲ್ಯಾಣಾದಿಕಾರಿ ಡಾ. ವೈ.ಕೆ. ಭಜಂತ್ರಿ, ಡಾ.ಎಸ್.ಸುಸ್ಮಿತಾ, ಡಾ.ಸಾಗರ ಪಟ್ಟೇದ, ಡಾ. ಸಾಕ್ಷಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ರಕ್ತದಾನ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಡಿ.ಎಲ್ ಓ ಡಾ. ರಾಜೇಂದ್ರ ಬಸರಿಗಿಡದ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ/ ಸಿಬ್ಬಂದಿ ರಕ್ತದಾನದಲ್ಲಿ ಪಾಲ್ಗೊಂಡರು.
ಹಿಂದೂಸ್ತಾನ್ ಸಮಾಚಾರ್ / lalita MP