ಬೆಂಗಳೂರು, 29 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಈ ಬಗ್ಗೆ ಪತ್ರ ಬರೆದು ಮನವಿಯನ್ನು ಸಹ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರದಿಂದ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು, ಆದರೆ ನಮಗೆ ಪೂರೈಕೆಯಾಗಿರುವುದು 5.27 ಲಕ್ಷ ಮೆಟ್ರಿಕ್ ಟನ್ ಮಾತ್ರ,
ರಸಗೊಬ್ಬರ ಉತ್ಪಾದನೆ ಮಾಡುವವರು ನಾವಲ್ಲ, ರಸಗೊಬ್ಬರ ಸರಬರಾಜು ಮಾಡುವವರು ನಾವಲ್ಲ. ಬಿಜೆಪಿ ಪಕ್ಷವೇ ಆಡಳಿತದಲ್ಲಿರುವ ಹರಿಯಾಣ, ಮಧ್ಯ ಪ್ರದೇಶ ರಾಜ್ಯಗಳಲ್ಲಿಯೂ ರಸಗೊಬ್ಬರ ಕೊರತೆ ಇದೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಕ್ಕಿ ಕೊಂದಿದ್ದರು. ನಾವು ಅವರಂತಲ್ಲ.
ಬಿಜೆಪಿ ನಾಯಕರು ರಾಜಕೀಯ ಟೀಕೆ ಮಾಡಿ ಕಾಲಹರಣ ಮಾಡುವ ಬದಲು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ತಕ್ಷಣ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa