ಬಳ್ಳಾರಿ, 29 ಜುಲೈ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ `ಶಾಸ್ತ್ರೀಯ ನೃತ್ಯ’ ಕಲಿಕಾ ತರಬೇತಿ ಶಿಬಿರವು ಆಗಸ್ಟ್ 01 ರ ಸಂಜೆ 06 ಗಂಟೆಗೆ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ನಡೆಯಲಿದೆ.
ಕಲಬುರಗಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಿ.ರಾಜು ಅವರು ಅಧ್ಯಕ್ಷತೆ ವಹಿಸುವರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ, ನೃತ್ಯ ತರಬೇತಿ ಕಲಾವಿದರಾದ ಡಿ.ಇಂದ್ರಾಣಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್