ಶಿಮ್ಲಾ, 29 ಜುಲೈ (ಹಿ.ಸ.) :
ಆ್ಯಂಕರ್ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಸುರಿದ ಭಾರೀ ಮಳೆಯಿಂದ ಇಬ್ಬರು ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ ಹಾಗೂ ಹಲವು ಮನೆಗಳಿಗೆ ಹಾಗೂ ವಾಹನಗಳಿಗೆ ಹಾನಿಯಾಗಿದೆ.
ಮಂಡಿಯ ಜೈಲು ರಸ್ತೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮವಾಗಿ ಪ್ರವಾಹ ನೀರು ಹಾಗೂ ಅವಶೇಷಗಳು ಮನೆಗಳಿಗೆ ನುಗ್ಗಿದ್ದು, ಮಾಜಿ ಕೌನ್ಸಿಲರ್ ಕೃಷ್ಣ ಅವರ ಪುತ್ರ ಮತ್ತು ಮೊಮ್ಮಗ ಸಾವನ್ನಪ್ಪಿದ್ದಾರೆ. ಅವರ ಸೊಸೆ ನಾಪತ್ತೆಯಾಗಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಕಾರ್ಯನಿರತವಾಗಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಾರಿ ಮಳೆಯಿಂದಾಗಿ ಚಂಡೀಗಢ-ಮನಾಲಿ ಹೆದ್ದಾರಿ ಮತ್ತು ಮಂಡಿ-ಪಠಾಣ್‌ಕೋಟ್ ಹೆದ್ದಾರಿ ಭೂಕುಸಿತದಿಂದಾಗಿ ಮುಚ್ಚಲ್ಪಟ್ಟಿದ್ದು, ಅನೇಕ ವಾಹನಗಳು ಸಿಲುಕಿಕೊಂಡಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa