ಕಾರವಾರ, 29 ಜುಲೈ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭಾಗವಹಿಸಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿದರು.
ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ನಗರಸಭೆ ಅಧ್ಯಕ್ಷರಾದ ರವಿರಾಜ್ ಅಂಕೋಲೇಕರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯ್ಕ್ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa