ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : ಉತ್ಖನನ ಕಾರ್ಯ ಆರಂಭ
ಮಂಗಳೂರು, 29 ಜುಲೈ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಪ್ರಮುಖ ಘಟ್ಟ ತಲುಪಿದೆ. ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿರುವ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದಾನೆ. ಗುರುತಿಸಿರುವ ಜಾಗದಲ್ಲಿ ಉತ್ಖನನ ಕಾರ್ಯ ಆರಂಭವಾಗಿದ
Dharmastal


ಮಂಗಳೂರು, 29 ಜುಲೈ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಪ್ರಮುಖ ಘಟ್ಟ ತಲುಪಿದೆ. ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿರುವ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದಾನೆ. ಗುರುತಿಸಿರುವ ಜಾಗದಲ್ಲಿ ಉತ್ಖನನ ಕಾರ್ಯ ಆರಂಭವಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನ ಹೂತಿಟ್ಟಿದ್ದೇನೆ ಎಂದು ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಈ ಕುರಿತು ತನಿಖೆಗೆ ರಾಜ್ಯ ಸರಕಾರ ಎಸ್‌ಐಟಿ ರಚಿಸಿದೆ. ದೂರುದಾರ ವ್ಯಕ್ತಿಯನ್ನ ಎರಡು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಎಸ್ಐಟಿ ವಿಚಾರಣೆ ವೇಳೆ ಎಲ್ಲೆಲ್ಲಿ ಶವಗಳನ್ನ ಹೂತಿಟ್ಟಿದ್ದೇನೆ ಎಂದು ಆತ ತಿಳಿಸಿದ್ದ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಜಾಗಗಳಲ್ಲಿ ಶವ ಹೂತಿಟ್ಟ ಜಾಗಗಳನ್ನ ಗುರುತು ಮಾಡಲಾಗಿದೆ.

ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ, ನೇತ್ರಾವತಿ ಸ್ನಾನಘಟ್ಟ ಹಾಗೂ ನೇತ್ರಾವತಿ ಸೇತುವೆಯ ಮಧ್ಯಭಾಗದ ಅರಣ್ಯ ಪ್ರದೇಶ ಹಾಗೂ ನೇತ್ರಾವತಿ ಸ್ನಾನಘಟ್ಟದ ಬಲ ಬದಿಯಲ್ಲಿದ್ದ ಅಜಿಕುರಿ ರಸ್ತೆ ಬದಿಯ ಜಾಗದಲ್ಲೂ ಶವ ಹೂತಿರುವುದನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದಾನೆ. ಒಟ್ಟು 13 ಸ್ಥಳಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಎಲ್ಲ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದ್ದು, ಸುಮಾರು 12 ಜನ ಕಾರ್ಮಿಕರು ಗುರುತಿಸಿರುವ ಜಾಗದಲ್ಲಿ ಉತ್ಖನನ ಕಾರ್ಯ ಪ್ರಾರಂಭಿಸಿದ್ದಾರೆ.

ಎಸ್ಐಟಿ ಹಿರಿಯ ಅಧಿಕಾರಿಗಳು, ವೈದ್ಯರು, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande