ಜನಪದ ಸಂಗೀತ ಕಲಾ ತರಬೇತಿ ಕಾರ್ಯಕ್ರಮ
ಗದಗ, 29 ಜುಲೈ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಗದಗ ಹಾಗೂ ಸಮಾಜ ಕಲ್ಯಾಣ ಇಲಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ಗಿರಿಜನ ಉಪಯೋಜನೆಯಡಿ 2025-26 ನೇ ಸಾಲಿನ ಗಿರಿಜನ ಉಪಯೋಜನೆಯಡಿ ಜನಪದ ಸಂಗೀತ ಕಲಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 30 ರಂ
ಪೋಟೋ


ಗದಗ, 29 ಜುಲೈ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಗದಗ ಹಾಗೂ ಸಮಾಜ ಕಲ್ಯಾಣ ಇಲಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ಗಿರಿಜನ ಉಪಯೋಜನೆಯಡಿ 2025-26 ನೇ ಸಾಲಿನ ಗಿರಿಜನ ಉಪಯೋಜನೆಯಡಿ ಜನಪದ ಸಂಗೀತ ಕಲಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 30 ರಂದು ಸಂಜೆ 5 ಗಂಟೆಗೆ ನಗರದ ಸರಕಾರಿ ಮೆಟ್ರಿಕ್ ನಂತರದ ( ಪ.ಪಂ. ) ಬಾಲಕರ ವಸತಿ ನಿಲಯ ಗಂಗಿಮಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ನಂದಾ ಹಣಬರಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರಿಮತಿ ಮಂಜುಳಾ ಎನ್, ಗದಗ ಬಾಲಕರ ವಸತಿ ನಿಲಯ , ಸರಕಾರಿ ಮೆಟ್ರಿಕ್ ನಂತರದ ( ಪ.ಪಂ.) ನಿಲಯ ಪಾಲಕರಾದ ರಿಯಾಜ್ ಅಗರಖೇಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಎಚ್.ಎಸ್.ವೆಂಕಟಾಪೂರ ಜನಪದ ಕಲಾವಿದರಾದ ಗೌಡಪ್ಪ ಬೊಮ್ಮಪ್ಪನವರ ತರಬೇತಿ ಗುರುಗಳಾಗಿ ಆಗಮಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande