ಬೆಳಗಾವಿ, 29 ಜುಲೈ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಅಂದಾಜು ₹63 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆ ಕ್ಷೇತ್ರದ 7 ಗ್ರಾಮಗಳ ಸುಮಾರು 2 ಸಾವಿರಕ್ಕೂ ಹೆಚ್ಚು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಮೂಲಕ ರೈತರ ಆರ್ಥಿಕ ಸ್ಥಿತಿಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa