ಬಳ್ಳಾರಿ, 29 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಗಂಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಹಭಾಗೀದಾರರ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಕಾವಲು ಸಮಿತಿಯ ಸದಸ್ಯರಿಗೆ ಜಿಲ್ಲಾ ಮಟ್ಟದಲ್ಲಿ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಗಾರ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಮಕೃಷ್ಣ ನಾಯಕ.ಎಂ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಬಳ್ಳಾರಿ (ನಗರ) ಹಾಗೂ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನ್ ಕುಮಾರಿ ಮತ್ತು ಸಂಡೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್.ಪಿ., ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ್.ಜಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಕೀಲರಾದ ತ್ರಿವೇಣಿ ಪತ್ತಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತ.ಸಿ ಅವರು ಸ್ವಾಗತಸಿ, ಪ್ರಾಸ್ತಾವಿಕವಾಗಿ ಮಾತನಾಡುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್