ರಾಜ್ಯಾದ ನಾನಾ ಜಿಲ್ಲೆಗಳಲ್ಲಿ ಲೋಕಾಯುಕ್ತರ ದಾಳಿ
ಬೆಂಗಳೂರು, 29 ಜುಲೈ (ಹಿ.ಸ.) : ಆ್ಯಂಕರ್ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಹಾಸನ, ಚಿತ್ರದುರ್ಗ, ಕೊಡಗು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜ
Raid


ಬೆಂಗಳೂರು, 29 ಜುಲೈ (ಹಿ.ಸ.) :

ಆ್ಯಂಕರ್ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ಕೊಡಗು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿನ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ ದಾಳಿ ನಡೆದಿದೆ.

ಬೆಂಗಳೂರು: ನಗರದಲ್ಲಿ ಎರಡು ಕಡೆ ದಾಳಿ ನಡೆದಿದೆ. ಕಡತಗಳ ಪರಿಶೀಲನೆ ನಡೆಯುತ್ತಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ನಿಗಾ ಇಡಲಾಗಿದೆ.

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಇಂಜಿನಿಯರ್ ಎಂ.ಆಂಜನೇಯಮೂರ್ತಿ ಮನೆ, ಸಂಬಂಧಿಕರ ಮನೆ ಹಾಗೂ ಗೌರಿಬಿದನೂರು, ಯಲಹಂಕ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು ಮತ್ತು ಮಧುಗಿರಿ ಕಚೇರಿಗಳ ಮೇಲೂ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್‌ಪಿ ಜೆಕೆ ಆ್ಯಂಟೊಣಿ ನೇತೃತ್ವದ ನಾಲ್ಕು ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

ಹಾಸನ ಮತ್ತು ಕೊಡಗು: ಹಾಸನದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನಲ್ಲಿರುವ ಎನ್‌ಎಚ್‌ಎಐ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆ ಮತ್ತು ಕೊಡಗು ಜಿಲ್ಲೆಯ ಕುಶಾಲನಗರ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಎಸ್‌ಪಿ ಸ್ನೇಹ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿತ್ರದುರ್ಗ: ಹಿರಿಯೂರಿನ ಟಿಹೆಚ್‌ಒ ಡಾ. ವೆಂಕಟೇಶ್ ಅವರ ಮನೆ ಹಾಗೂ ಕ್ಲಿನಿಕ್ ಮೇಲೆ ದಾಳಿ ನಡೆದಿದೆ. ಎಸ್‌ಪಿ ವಾಸುದೇವರಾಮ್ ಮತ್ತು ಡಿವೈಎಸ್‌ಪಿ ಮೃತ್ಯುಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande