ಬೆಂಗಳೂರು, 29 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗಧಿ ಮಾಡುವ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳ ವಿವರ ಇಲ್ಲಿದೆ..
ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆ ಚರ್ಚೆ.
ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿ ಗತಿ.
ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.
ಗ್ಯಾರಂಟಿಗಳ ಯಶಸ್ವೀ ಜಾರಿಯಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಆಗಿರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಶಾಸಕರುಗಳ ಗಮನ ಸೆಳೆದರು.
ಸರ್ಕಾರ ಪ್ರತಿ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಒದಗಿಸಿದ್ದು, ಇದನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಅವರ ಫಲಾನುಭವಿಗಳ ಜೊತೆ ಸಂಪರ್ಕದಲ್ಲಿ ಇರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಪ್ರತಿ ಕೆಡಿಪಿ ಸಭೆಗಳಲ್ಲಿ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನ ಧೋರಣೆ ಬಗ್ಗೆ ಕೆಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa