ವಿಜಯಪುರ, 29 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 06 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 08 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 07 ರಿಂದ ಸಂಜೆ 05 ಗಂಟೆಯವರೆಗೆ ಮತದಾನ ನಡೆಯಲಿದೆ. ಆಗಸ್ಟ್ 20 ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande