ರಾಯಚೂರು : ಜಯಂತಿಗಳ ಪೂರ್ವಭಾವಿ ಸಭೆ
ರಾಯಚೂರು, 29 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 09 ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16 ರಂದು ಶ್ರೀಕೃಷ್ಣ್ಣ ಜಯಂತಿ ನಡೆಯಲಿವೆ. ಈ ಜಯಂತಿ ಅಂಗವಾಗಿ ಜುಲೈ 30ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ
ರಾಯಚೂರು : ಜಯಂತಿಗಳ ಪೂರ್ವಭಾವಿ ಸಭೆ


ರಾಯಚೂರು, 29 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 09 ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16 ರಂದು ಶ್ರೀಕೃಷ್ಣ್ಣ ಜಯಂತಿ ನಡೆಯಲಿವೆ.

ಈ ಜಯಂತಿ ಅಂಗವಾಗಿ ಜುಲೈ 30ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ನಾನಾ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.

ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬ0ಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ನಾನಾ ಸಮಾಜದ ಮುಖಂಡರುಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande