ಬಳ್ಳಾರಿ: 7 ದಿನಗಳಲ್ಲಿ ಫಲಿತಾಂಶ ಪ್ರಕಟ ; ವಿಶ್ರೀಕೃವಿವಿ ಐತಿಹಾಸಿಕ ಸಾಧನೆ
ಬಳ್ಳಾರಿ, 29 ಜುಲೈ (ಹಿ.ಸ.) : ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು 2024-25ನೇ ಸಾಲಿನ ಸ್ನಾತಕ ಪದವಿಯ 5ನೇ ಮತ್ತು 6ನೇ ಸೆಮಿಸ್ಟರ್‍ನ 12,532 ವಿದ್ಯಾರ್ಥಿಗಳ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಪೂರ್ಣಗೊಂಡ 7 ದಿನಗಳಲ್ಲಿ ಪ್ರಕಟಿಸಿ ಕರ್ನಾಟಕದ ಪ್ರಥಮ ವಿಶ್ವವಿದ್ಯಾಲಯವಾಗಿ ಗ
ಬಳ್ಳಾರಿ: 7 ದಿನಗಳಲ್ಲಿ ಫಲಿತಾಂಶ ಪ್ರಕಟ ; ವಿಶ್ರೀಕೃವಿವಿ ಐತಿಹಾಸಿಕ ಸಾಧನೆ


ಬಳ್ಳಾರಿ, 29 ಜುಲೈ (ಹಿ.ಸ.) :

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು 2024-25ನೇ ಸಾಲಿನ ಸ್ನಾತಕ ಪದವಿಯ 5ನೇ ಮತ್ತು 6ನೇ ಸೆಮಿಸ್ಟರ್‍ನ 12,532 ವಿದ್ಯಾರ್ಥಿಗಳ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಪೂರ್ಣಗೊಂಡ 7 ದಿನಗಳಲ್ಲಿ ಪ್ರಕಟಿಸಿ ಕರ್ನಾಟಕದ ಪ್ರಥಮ ವಿಶ್ವವಿದ್ಯಾಲಯವಾಗಿ ಗುರುತಿಸಿಕೊಂಡಿದೆ.

ಜುಲೈ 22ರಂದು ಪರೀಕ್ಷೆಗಳು ಮುಗಿದಿದ್ದ ಬಿ.ಎ., ಬಿ.ಎಸ್ಸಿ., ಬಿ.ಕಾಂ, ಬಿಬಿಎ, ಬಿಸಿಎ ಸ್ನಾತಕ ಕೋರ್ಸ್‍ಗಳ ಮೌಲ್ಯಮಾಪನವನ್ನು ಕೇವಲ 7 ದಿನಗಳಲ್ಲಿ ಪೂರ್ಣಗೊಳಿಸಿ ವಿಶ್ವವಿದ್ಯಾಲಯವು ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಯುಯುಸಿಎಂಎಸ್ ತಂತ್ರಾಂಶದ ಮೂಲಕ ವೀಕ್ಷಿಸಬಹುದಾಗಿದೆ.

ಈ ಮೂಲಕ ಒಟ್ಟು 12532 ವಿದ್ಯಾರ್ಥಿಗಳ ಫಲಿತಾಂಶವನ್ನು ವಾರದೊಳಗೆ ಪ್ರಕಟಿಸಿದ ರಾಜ್ಯದ ಪ್ರಥಮ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ವಿಶ್ವವಿದ್ಯಾಲಯ ಆರಂಭಗೊಂಡ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಕಾಲಾವಧಿಯಲ್ಲಿ ಫಲಿತಾಂಶ ಪ್ರಕಟಿಸಿರುವುದು ವಿಶೇಷವಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande