ಭಾಲ್ಕಿ, 29 ಜುಲೈ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹರಣಾಳ–ಡಾವರಗಾವ್ ಮಾರ್ಗವಾಗಿ ಕುರುಬಖೇಳ್ಗಿ ಗ್ರಾಮದವರೆಗೆ ಸುಮಾರು ₹6.90 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೂಮಿಪೂಜೆ ನೆರವೇರಿಸಿದರು.
ಈ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನತೆಗೆ ಉತ್ತಮ ರಸ್ತೆ ಸೌಲಭ್ಯ ಒದಗಿಸುವ ಮೂಲಕ ಅವರ ದಿನನಿತ್ಯದ ಜೀವನ ಸುಲಭಗೊಳಿಸುವುದು ನಮ್ಮ ಉದ್ದೇಶ. ಈ ಭಾಗದ ಸಂಪರ್ಕ ಸುಧಾರಣೆಯೊಂದಿಗೆ, ಶಿಕ್ಷಣ, ಆರೋಗ್ಯ, ವ್ಯಾಪಾರ ಮತ್ತು ಇತರ ಚಟುವಟಿಕೆಗಳಿಗೆ ಸುಗಮತೆ ಸಿಗಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa