ವಿಜಯಪುರ, 29 ಜುಲೈ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಜಮೀನಿನಲ್ಲಿ ಬೆಳೆದ ಗಾಂಜಾ ಬೆಳೆಯನ್ನು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗುಡಿ ತೋಟದ ವಸ್ತಿಯಲ್ಲಿ ನಡೆದಿದೆ.
ಸುದೀಪ್ ಶೆಂಡಗಿ ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 46,900 ಮೌಲ್ಯದ 46 ಕೆಜಿ 900 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande