ವಿಜಯಪುರ, 29 ಜುಲೈ (ಹಿ.ಸ.) :
ಆ್ಯಂಕರ್ : ತನ್ನ ಸಹಪಾಠಿ ಶಿಕ್ಷಕರೊಬ್ಬರಿಗೆ ಚಪ್ಪಲಿಯಿಂದ ಹೊಡೆದಿದ್ದ ಜಿಲ್ಲೆಯ ಇಳಕಲ್ಲ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕಿ ಅಮೀನಾ ಕೋಳೂರ ಅವರನ್ನು ಅಮಾನತ್ತುಗೊಳಿಸಲಾಗಿದೆ.
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಮಕ್ಕಳಿಗೆ ನಾಟಕ, ನೃತ್ಯ ಕಲಿಸುವ ವಿಷಯಕ್ಕೆ ಸಂಬಂಧಿಸಿ ಶಿಕ್ಷಕಿ ಅಮೀನಾ ಕೋಳೂರ ವಿದ್ಯಾರ್ಥಿಗಳ ಎದುರೇ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದಿದ್ದರು. ಈ ಘಟನೆ ರಾಜ್ಯಾದ್ಯಂತ ಗಮನ ಸೆಳೆದಿತ್ತು.
ಈ ಘಟನೆ ಖಂಡಿಸಿ ಶಿಕ್ಷಕ ವಸ್ತ್ರದ ಅವರ ಪರವಾಗಿ ಜಂಗಮ ಸಮಾಜ ಹುನಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಶಿಕ್ಷಕಿಯ ಅಮಾನತ್ತಿಗೆ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಶಿಕ್ಷಕಿ ಅಮೀನಾ ಕೋಳೂರ ಅವರನ್ನು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ.ಮಿರ್ಜಿ ಅಮಾನತ್ತುಗೊಳಿಸಿದ್ದಾರೆ.
ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದ ಆರೋಪವಲ್ಲದೇ ಶಿಕ್ಷಕಿ ಅಮೀನಾ ವಿರುದ್ಧ ಇನ್ನೂ ಅನೇಕ ಆಪಾದನೆಗಳು ಇರುವುದರಿಂದ ಅವರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande