ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ
ವಿಜಯಪುರ, 29 ಜುಲೈ (ಹಿ.ಸ.) : ಆ್ಯಂಕರ್ : ಆಗಸ್ಟ್ 15 ರಂದು ಜರಗುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ
ಸಭೆ


ವಿಜಯಪುರ, 29 ಜುಲೈ (ಹಿ.ಸ.) :

ಆ್ಯಂಕರ್ : ಆಗಸ್ಟ್ 15 ರಂದು ಜರಗುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ‍್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬAಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಆಂಬುಲೆನ್ಸ್ ಸಹಿತ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ವೇದಿಕೆ ನಿರ್ಮಾಣ ಮತ್ತು ನಿರ್ವಹಣೆ, ವೇದಿಕೆ ಅಲಂಕಾರ,ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ, ವಹಿಸಿದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ಲಾಸ್ಟಿಕ್ ಧ್ವಜ ಬಳಸದಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸುವಂತೆಯೂ ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಾತಂತ್ರö್ಯದ ಮುನ್ನಾದಿನ ನಗರದ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲಾ ಕಚೇರಿಗಳಲ್ಲಿ ಶ್ರಮದಾನ ಮಾಡುವ ಮೂಲಕ ಕಚೇರಿ ಆವರಣವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಅಂದು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಮಾತನಾಡಿ, ಸ್ವಾತಂತ್ರö್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವಂತೆಯೂ, ಧ್ವಜ ಸಂಹಿತೆ ಅನ್ವಯ ಧ್ವಜಾರೋಹಣ ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರಿ ಕಚೇರಿಯಲ್ಲಿ ಎಲ್ಲ ಸಿಬ್ಬಂದಿ,ಅಧಿಕಾರಿಗಳು ಹಾಜರಿರಿಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಂಘ ಸ0ಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande