ಚಿತ್ರದುರ್ಗ, 29 ಜುಲೈ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ಚಳ್ಳಕೆರೆ ಬಳಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ-ತಂಗಿ ಮೃತಪಟ್ಟಿದ್ದಾರೆ. ಮೃತರನ್ನು ತಳಕು ಗ್ರಾಮದ ಅಭಿ (28), ಮಂಜುಳಾ (25) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ರಾಯಚೂರು ಮೂಲದ ಕಾರು ಚಾಲಕ ನಾಗಿರೆಡ್ಡಿ ಗಾಯಗೊಂಡಿದ್ದು, ಆತನನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa