ಕೊಪ್ಪಳ, 03 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರಿನಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ವಿಶೇಷ ಡಿ.ಎಡ್ ಸಾಮಾನ್ಯ ಡಿ.ಎಡ್ ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜುಲೈ 12 ರೊಳಗೆ ವೆಬ್ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.
D.Ed.Spl.Ed(VI)- Helen Keller Govt. Teachers Training Centre for Visually Handicapped - KK016, D.Ed.Spl.Ed(HI)–Govt. Teachers Training Centre for Hearing Handicapped - KK015 ನಲ್ಲಿ ತರಬೇತಿ ನೀಡಲಾಗುವುದು. ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗ ಅವಕಾಶಗಳಿದ್ದು, ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ, ಸಿಬಿಎಸ್ಸಿ ಶಾಲೆಗಳಲ್ಲಿ ಶಿಕ್ಷಕರಾಗಬಹುದು. ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ರಾಷ್ಟೀಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಮಾತಿನ ತರಬೇತಿ ಘಟಕಗಳಲ್ಲೂ ಕಾರ್ಯನಿರ್ವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ) ರವರ ಕಛೇರಿ, ಅಂಧ ಹಾಗೂ ಶ್ರವಣ ದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್ನಗರ, ಮೈಸೂರು-570001, ದೂರವಾಣಿ ಸಂ:0821- 2491600, ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್-9113561620, ಟಿ.ಡಿ. ಮಂಜುನಾಥ-9686762378 ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್