ಬೆಂಗಳೂರು, 03 ಜುಲೈ (ಹಿ.ಸ.) :
ಆ್ಯಂಕರ್ : ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಖಚಿತವಾಗಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಮುಖ್ಯಮಂತ್ರಿಯಾಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ, ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೇ ಹೇಳುತ್ತಿದ್ದಾರೆ ಎಂದರು.
ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಲ್ಲಿ ವಿಶ್ವಾಸ ಹೊರಟುಹೋಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa