ಕರಾಮುವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 03 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26 ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ
ಕರಾಮುವಿ ಪ್ರವೇಶಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 03 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26 ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.

ವಿಶ್ವ ವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‍ಪೆಕ್ಟಸ್‍ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ ಎಕ್ಸ್ಸರ್ವೀಸ್‍ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೈರ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.

ಕೋವಿಡ್‍ನಿಂದಾಗಿ ಮೃತ ಪೆÇೀಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವಾಗ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೆರವು ಪ್ರದೇಶದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಕರಾಮುವಿ ಪ್ರಾದೇಶಿಕ ಕೇಂದ್ರ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಹೆಚ್.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande