ಕೊಪ್ಪಳ : ಜುಲೈ 7 ರಂದು ವಿ.ವಿ.ಯಲ್ಲಿ ಪತ್ರಿಕಾ ದಿನಾಚರಣೆ
ಕೊಪ್ಪಳ, 03 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜುಲೈ 7 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.
ಕೊಪ್ಪಳ : ಜುಲೈ 7 ರಂದು ವಿ.ವಿ.ಯಲ್ಲಿ ಪತ್ರಿಕಾ ದಿನಾಚರಣೆ


ಕೊಪ್ಪಳ, 03 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜುಲೈ 7 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರು ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ವಿಶ್ವ ವಿದ್ಯಾಲಯದ ಕಾನೂನು ನಿಕಾಯ ಡೀನರಾದ ವಿ.ಸುದೇಶ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ, ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅವರು ಭಾಗವಹಿಸಲಿದ್ದಾರೆ.

ಕೊಪ್ಪಳ ವಿವಿ ಕುಲಸಚಿವ ಕೆ.ವಿ.ಪ್ರಸಾದ್, ವಿವಿಯ ಹಣಕಾಸು ಅಧಿಕಾರಿ ಅಮೀನಸಾಬ ಅತ್ತಾರ, ವಿವಿಯ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಸೇರಿದಂತೆ ಸಿಂಡಿಕೇಟ್ ಹಾಗೂ ಆಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande