ಬಳ್ಳಾರಿ, 03 ಜುಲೈ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜುಲೈ 05 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಅಂದು ವಿಜಯನಗರ ಜಿಲ್ಲೆಯಿಂದ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಭವನದಲ್ಲಿ ಆಯೋಜಿಸಿರುವ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 02 ರಿಂದ ಸಂಜೆ 06 ಗಂಟೆಯವರೆಗೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮತ್ತು ಮುಖಂಡರೊಂದಿಗೆ ಸಂವಾದ ನಡೆಸುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್