ಜುಲೈ 5 ರಂದು ವಿಶ್ವ ಪರಿಸರ ದಿನಾಚರಣೆ
ಕೊಪ್ಪಳ, 03 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶ್ರೀ ಗವಿಸಿದ್ಧೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ವಿ
ಜುಲೈ 5 ರಂದು ವಿಶ್ವ ಪರಿಸರ ದಿನಾಚರಣೆ


ಕೊಪ್ಪಳ, 03 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶ್ರೀ ಗವಿಸಿದ್ಧೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 5 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸುವರು. ಎಸ್.ಜಿ.ವಿ.ವಿ.ಟಿ. ಟ್ರಸ್ಟ್‍ನ ಕಾರ್ಯದರ್ಶಿ ಡಾ.ಆರ್. ಮರೇಗೌಡರ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ, ವಿಜಯನಗರದ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ಶ್ರೀ ಗವಿಸಿದ್ದೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಚನ್ನಬಸವ ಎ. ಅವರು ಭಾಗವಹಿಸುವರು.

ಕೊಪ್ಪಳದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಡಯಟ್ ಮತ್ತು ನೋಡಲ್ ಅಧಿಕಾರಿ ಗವಿಸಿದ್ದೇಶ್ವರಸ್ವಾಮಿ ರಾಚಯ್ಯ ಬೆಣಕಲ್ಲಮಠ ಅವರು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕೊಪ್ಪಳ ಪರಿಸರ ಅಧಿಕಾರಿ ವೈ.ಎಸ್. ಹರಿಶಂಕರ ಹಾಗೂ ಗವಿಸಿದ್ದೇಶ್ವರ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಸಸ್ಯಶಾಸ್ತ್ರ ಮುಖ್ಯಸ್ಥ ಡಾ.ಸುಂದರ್ ಎಸ್. ಮೇಟಿ ಅವರು ಉಪಸ್ಥಿತರಿರುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande